ಹೊಸದಿಲ್ಲಿ: ಮುಂದಿನ ಹತ್ತು ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಉದ್ದಗಲದ ಹನ್ನೆರಡು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಹನ್ನೆರಡು ರಾಜ್ಯಗಳಲ್ಲಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿ ಸೇರಿವೆ.
ಮಾರ್ಚ್ 4 ರಂದು, ಪ್ರಧಾನ ಮಂತ್ರಿಗಳು ತೆಲಂಗಾಣದ ಆದಿಲಾಬಾದ್‌ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಸರಣಿಯನ್ನು ಪ್ರಾರಂಭಿಸಲಿದ್ದಾರೆ.
ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ಅಣುಶಕ್ತಿ ಇಲಾಖೆ (ಡಿಎಇ) ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಭಾರತೀಯ ನಾಭಿಕಿಯಾ ವಿದ್ಯುತ್ ನಿಗಮ್ ಲಿಮಿಟೆಡ್ (ಭಾವಿನಿ) ಗೆ ಭೇಟಿ ನೀಡಲಿದ್ದಾರೆ. ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ನಂತರ ಅವರು ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ. ಮಾರ್ಚ್ 5 ರಂದು, ಪ್ರಧಾನಿ ಮೋದಿ ಅವರು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಮಾರ್ಚ್ 7 ರಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಪ್ರಯಾಣಿಸಲಿದ್ದಾರೆ.ಈಗಾಗಲೇ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಅದೇ ದಿನ ಸಂಜೆ ಹೊಸದಿಲ್ಲಿಯಲ್ಲಿ ಮಾಧ್ಯಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 12 ರಂದು, ಪ್ರಧಾನಿ ಮೋದಿ ಅವರು ಗುಜರಾತ್‌ನ ಸಬರಮತಿಗೆ ಭೇಟಿ ನೀಡಲಿದ್ದಾರೆ. ಬಳಿಕ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರವಾಸಕ್ಕೆ ತೆರಳಲಿದ್ದಾರೆ. ಮಾರ್ಚ್ 13 ರಂದು ಗುಜರಾತ್ ಮತ್ತು ಅಸ್ಸಾಂನಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ ಅಡಿಗಲ್ಲು ಹಾಕುವುದರೊಂದಿಗೆ ಎಡೆಬಿಡದ ವೇಳಾಪಟ್ಟಿಯನ್ನು ಮುಕ್ತಾಯಗೊಳಿಸಲಿದ್ದಾರೆ.