Advertisement

ದೇಶದ ಪ್ರಸ್ತುತ ಸ್ಥಿತಿಗತಿಯ ಕುರಿತು ಪ್ರಧಾನಿ ಮೋದಿಯಿಂದ ಇಂದು ಮನ್ ಕಿ ಬಾತ್ ಕಾರ್ಯಕ್ರಮ

09:14 AM Mar 30, 2020 | Mithun PG |

ನವದೆಹಲಿ: ವಿಶ್ವವನ್ನೇ ನಲುಗಿಸಿರುವ ಮಹಾಮಾರಿ ಕೋವಿಡ್-19 ಸೋಂಕಿನ ಕುರಿತು ಪ್ರಧಾನಿ ಮೋದಿ ತಮ್ಮ ಜನಪ್ರಿಯ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮಾತನಾಡಲಿದ್ದಾರೆ.

Advertisement

ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಕೋವಿಡ್ 19 ನಿಂದ ದೇಶದಲ್ಲಿ ತಲೆದೋರಿರುವ ಸಮಸ್ಯೆಯ ಬಗ್ಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗಮನಹರಿಸಲಾಗುವುದು ಎಂದಿದ್ದಾರೆ.

 

ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಸಿಕೊಡಲಿದ್ದು ದೇಶದ ಪ್ರಸ್ತುತ ಹಾಗುಹೋಗುಗಳ ಕುರಿತು ಮಾತನಾಡುತ್ತಾರೆ.

Advertisement

ಭಾರತದಲ್ಲಿ ಕೋವಿಡ್-10 ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಮಾತ್ರವಲ್ಲದೆ ಸಾವನ್ನಪ್ಪುವವರ ಸಂಖ್ಯೆ ಕೂಡ ಏರುಗತಿಯಲ್ಲಿ ಸಾಗಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ಮೋದಿ ಈ ಹಿಂದೆ ದೇಶವನ್ನೇ 21 ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.