Advertisement

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

01:30 PM Dec 28, 2022 | Team Udayavani |

ಅಹಮದಾಬಾದ್:‌ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Advertisement

ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ.

ಹೀರಾಬೆನ್‌ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಮೋದಿ ಗುಜರಾತ್‌ ಎಲೆಕ್ಷನ್‌ ಆದ ತಾಯಿ ಆಶೀರ್ವಾದವನ್ನು ಪಡೆದುಕೊಂಡಿದ್ದರು. ನಿನ್ನೆಯಷ್ಟೇ ಮೋದಿ ಅವರ ಸಹೋದರ ಪ್ರಹ್ಲಾದ್‌ ಮೋದಿ ಅವರ ಕಾರು ಮೈಸೂರಿನಲ್ಲಿ ಅಪಘಾತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next