Advertisement

ಗಡಿಯ ವಿದ್ಯಮಾನಗಳ ಬಗ್ಗೆ ಪ್ರಧಾನಿ ಮೋದಿ ಮೌನ ಸರಿಯಲ್ಲ: ಸಿದ್ದರಾಮಯ್ಯ

11:59 AM Jun 18, 2020 | keerthan |

ಬೆಂಗಳೂರು: ಚೀನಾದೊಂದಿಗೆ ನಡೆದ ಘರ್ಷಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದಾರೆ.‌ ಯೋಧರ ಶೌರ್ಯ, ತ್ಯಾಗ, ಬಲಿದಾನ ಸದಾ ಸ್ಮರಣೀಯ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ನಮ್ಮ ಸೇನೆ ಅತ್ಯಂತ ಶಕ್ತಿಶಾಲಿಯಾಗಿದೆ. ಆದರೆ, ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿಯವರ ಮೌನ ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಇದು ಮುಂದೆ ಕರಾಳ ಶಾಸನವಾಗಲಿದೆ ಎಂದರು. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಗೇಣಿದಾರರನ್ನು ರಕ್ಷಿಸಿಕೊಂಡು ಬಂದಿತ್ತು. ಇದರ ವಿರುದ್ಧ ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು. ಇದಕ್ಕೆ ಶಾಸಕರು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಪೆಟ್ರೋಲ್, ಡೀಸೆಲ್‌ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಇದರಿಂದ ಪೆಟ್ರೋಲ್, ಡೀಸೆಲ್‌ ಲೀಟರ್ ಗೆ 25-30 ರೂ.‌ಪ್ರಕಾರ ಮಾರಾಟವಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಪ್ರಧಾನಿ ಮೋದಿಯವರು ದೇಶದ ಆರ್ಥಿಕತೆ ಮತ್ತು ಜನರ ಆರೋಗ್ಯವನ್ನು ಹಾಳು ಮಾಡಲು ಹೊರಟಿದೆ. ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದರು.

Advertisement

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಈಗ ದಿನಾಂಕ ನಿಗದಿಯಾಗಿದೆ. ಜುಲೈ 2 ರಂದು ಪದಗ್ರಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಶಾಸಕರು ಈ ಸಂಬಂಧ ತಮ್ಮ ಕ್ಷೇತ್ರಗಳಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿರುವ ಬಿ.ಕೆ. ಹರಿಪ್ರಸಾದ್, ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next