Advertisement

Pm Modi: ಮುಸ್ಲಿಂ ಬಗ್ಗೆ ಪ್ರಧಾನಿ ಮೋದಿ ಭಾಷಣ: ಖಾಸಗಿ ದೂರು ವಜಾ

10:43 AM Jul 18, 2024 | Team Udayavani |

ಬೆಂಗಳೂರು: “ಮುಸ್ಲಿಮರನ್ನು ನುಸುಳುಕೋರರು ಎಂದು ಆರೋಪಿಸಿರುವುದರ ಜೊತೆಗೆ ಕಾಂಗೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ’ ಎಂಬುದಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ಭಾಷಣ ಹಿಂದೂ ಮುಸ್ಲಿಮರ ನಡುವೆ ಗೊಂದಲಕ್ಕೆ ಕಾರಣವಾಗಲಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಬೆಂಗಳೂರಿನ ಹೆಬ್ಟಾಳದ ನಿವಾಸಿಯೊಬ್ಬರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ದೂರುದಾರರು ಸಲ್ಲಿಸಿರುವ  ಪ್ರಕರಣವನ್ನು ತನಿಖೆಗೆ ವಹಿಸುವುದಕ್ಕೆ ಅರ್ಹವಿಲ್ಲ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿದೆ.

ಏನಿದು ಪ್ರಕರಣ?: ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನದಲ್ಲಿ ನಡೆದಿದ್ದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೆಂದ್ರ ಮೋದಿ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ದೂರುದಾರರು ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next