ಶಿವಮೊಗ್ಗ: ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮಾವೇಶ ಮತ್ತು ಬೆಂಗಳೂರಿನಲ್ಲಿನ ಭಾರತೀಯ ವಿಜ್ಞಾನ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು ಈ ವೇಳೆ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ ನಡೆಸಲು ತುಮಕೂರಿಗೆ ಹೊರಟಿದ್ದ ರೈತರನ್ನು ಶಿವಮೊಗ್ಗದ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನಲ್ಲಿ ಇಂದು ಆಯೋಜನೆಯಾಗಿರುವ ಪ್ರಧಾನಿ ಮೋದಿಯವರ ಕಾರ್ಯಕ್ರಮದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ವಿರುದ್ದ ಪ್ರತಿಭಟನೆಗೆ ರೈತರು ತೆರಳುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರಿಗೆ ಪ್ರತಿಭಟನೆ ನಡೆಸಲು ಹೊರಟಿದ್ದ ಕೆಲ ರೈತರನ್ನು ಶಿವಮೊಗ್ಗದ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಬಂಧಿಸಲಾಗಿದೆ.