Advertisement

ಸೆಪ್ಟಂಬರ್‌ನಲ್ಲಿ ಪ್ರಧಾನಿ ಮೋದಿ ಅಮೆರಿಕ ಭೇಟಿ: ವಿಶ್ವಸಂಸ್ಥೆಯಲ್ಲಿ ಭಾಷಣ?

11:51 PM Jul 16, 2024 | Team Udayavani |

ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ 79ನೇ ಸಾಮಾನ್ಯ ಅಧಿವೇಶನದಲ್ಲಿ ಭಾಗವಹಿಸಿ ಸೆ.26ರಂದು ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Advertisement

3 ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿ ವೇಶನ ಸೆ.24ರಿಂದ ಸೆ.30ರ ವರೆಗೆ ನಡೆಯಲಿದೆ.

ಕಳೆದ ವರ್ಷ ಜೂನ್‌ನಲ್ಲಿ ಮೋದಿ, ವಿಶ್ವಸಂಸ್ಥೆಯಲ್ಲಿ ವಿಶ್ವ ಯೋಗ ದಿನದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿದ್ದರು. ಸೆಪ್ಟಂಬರ್‌ 2021ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next