Advertisement

LPG Cylinder Price 100ರೂ. ಇಳಿಕೆ… ಮಹಿಳಾ ದಿನದಂದು ಶುಭ ಸುದ್ದಿ ನೀಡಿದ ಪ್ರಧಾನಿ

10:57 AM Mar 08, 2024 | Team Udayavani |

ನವದೆಹಲಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ೧೦೦ ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಸುದ್ದಿಯೊಂದನ್ನು ನೀಡಿದ್ದಾರೆ.

Advertisement

ಈ ಕುರಿತು ಟ್ವೀಟ್ ಮಾಡಿದ ಅವರು ‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ, ”ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಮಹಿಳೆಯರಿಗೆ ಅಡುಗೆ ಅನಿಲ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಕುಟುಂಬದ ಯೋಗಕ್ಷೇಮವನ್ನು ಬೆಂಬಲಿಸುವುದರ ಜೊತೆಗೆ ಆರೋಗ್ಯಕರ ವಾತಾವರಣವನ್ನು ನಿರ್ಮಿಸಲು ಸಂಕಲ್ಪವನ್ನು ಹೊಂದಿದ್ದು ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುವಂತಹ ಯೋಜನೆಗಳನ್ನು ಕಾರ್ಯಗತಗೊಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next