ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಯೂ ಟರ್ನ್ ಹೊಡೆದಿರುವುದು ಯಾಕೆ ಎಂದು ಪ್ರಶ್ನಿಸಿರುವ ಪ್ರಧಾನಿ ನರೇಂದ್ರ ಮೋದಿ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ವಾಪಸ್ ಪಡೆಯುವಂತೆ ಸೋಮವಾರ (ಫೆ.08) ಮನವಿ ಮಾಡಿಕೊಂಡರು.
ಇದನ್ನೂ ಓದಿ:ಪಿಕಪ್- ದ್ವಿಚಕ್ರ ವಾಹನ ಅಪಘಾತ: ಸಿಂಧೂ ಸಾಫ್ಟ್ ಡ್ರಿಂಕ್ಸ್ ನ ಮಾಲಕರ ಪುತ್ರ ಮೃತ್ಯು
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ವಂದನಾ ನಿರ್ಣಯ ಭಾಷಣಕ್ಕೆ ಉತ್ತರಿಸಿ ಮಾತನಾಡಿದ ಅವರು, ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವಂತೆ ನಾನು ವಿನಂತಿಸಿಕೊಳ್ಳುತ್ತೇನೆ. ಕೃಷಿ ಕಾಯ್ದೆ ತಿದ್ದುಪಡಿಗೆ ಒಂದು ಅವಕಾಶ ಕೊಡಿ. ಮಾತುಕತೆ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸರ್ಕಾರ ಸಿದ್ದವಿವೆ. ಅಲ್ಲದೇ ಎಂಎಸ್ ಪಿಯನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ.
ಬಡವರಿಗೆ ವಿತರಿಸುತ್ತಿರುವ ರೇಷನ್ ಯೋಜನೆ ಮುಂದುವರಿಸಲಿದ್ದು, ಕೃಷಿ ಮಾರುಕಟ್ಟೆಯಲ್ಲಿನ ಮಂಡಿಗಳನ್ನು ಆಧುನಿಕರಣಗೊಳಿಸುವುದಾಗಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ದೇಶದಲ್ಲಿ ಒಂದು ಹೆಕ್ಟೇರ್ ಗಿಂತ ಕಡಿಮೆ ಜಮೀನು ಹೊಂದಿರುವವರ ಸಂಖ್ಯೆ ಶೇ.68ರಷ್ಟು ಏರಿಕೆಯಾಗಿದೆ. ಅಲ್ಲದೇ ಬೆಳೆ ವಿಮೆ ಯೋಜನೆಯಡಿ 90 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯಡಿ 1.15 ಲಕ್ಷ ಕೋಟಿ ರೂಪಾಯಿ ವಿತರಿಸಲಾಗಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ತಲೆದೋರುವ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿತ್ತು ಎಂದು ಹೇಳಿದರು.