Advertisement

ಬಿಷ್ಕೆಕ್ ಶೃಂಗ; ಇಮ್ರಾನ್ ಎದುರಲ್ಲೇ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ

09:45 AM Jun 18, 2019 | Team Udayavani |

ಬಿಷ್ಕೆಕ್:ಭಯೋತ್ಪಾದನೆಗೆ ಯಾವ ದೇಶ ಬೆಂಬಲ ಮತ್ತು ಹಣಕಾಸು ನೆರವು ನೀಡುತ್ತದೆಯೋ ಆ ದೇಶಗಳನ್ನೇ ಹೊಣೆಗಾರರನ್ನಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಿರ್ಗಿಸ್ತಾನದ ಬಿಷ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಒಕ್ಕೂಟ ಸಮ್ಮೇಳನದಲ್ಲಿ ಖಡಕ್ ಸಂದೇಶ ರವಾನಿಸಿದ್ದಾರೆ.

Advertisement

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಮ್ಮುಖದಲ್ಲಿಯೇ ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ದೇಶದ ವಿರುದ್ಧ ಚಾಟಿ ಬೀಸಿ, ಉಗ್ರವಾದ ಹತ್ತಿಕ್ಕಲು ಶಾಂಘೈ ಸಹಕಾರ ಒಕ್ಕೂಟದ ಸಹಕಾರ ಅತ್ಯಗತ್ಯ ಎಂದು ಹೇಳಿದರು!

ಪಾಕಿಸ್ತಾನದ ಹೆಸರನ್ನು ಹೇಳದೆಯೇ ವಾಗ್ದಾಳಿ ನಡೆಸಿದ ಮೋದಿ, ಕಳೆದ ಹಲವಾರು ದಶಕಗಳಿಂದ ಒಂದು ದೇಶ ಭಾರತದ ವಿರುದ್ಧ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ. ಇಂತಹ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಹೋರಾಡಲು ಎಲ್ಲಾ ದೇಶಗಳು ಒಗ್ಗಟ್ಟಾಗಬೇಕಾಗಿದೆ ಎಂದು ಕರೆ ನೀಡಿದರು.

ಪಾಕ್ ಜೊತೆಗೆ ಸಂಬಂಧ ಸುಧಾರಣೆಗೆ ನಾವು ಪ್ರಯತ್ನ ನಡೆಸಿದೆವು. ಪಾಕಿಸ್ತಾನವು ಉಗ್ರರಿಂದ ಮುಕ್ತವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು. ಸದ್ಯದ ಸ್ಥಿತಿಯಲ್ಲಿ ಇದು ಸಾಧ್ಯವಾಗುವಂತೆ ಕಾಣುತ್ತಿಲ್ಲ. ಹೀಗಾಗಿ ಭಾರತ ಪ್ರಸ್ತಾಪಿಸಿದ ವಿಚಾರಗಳ ಕುರಿತು ಕಠಿಣ ಕ್ರಮಗಳನ್ನು ಪಾಕಿಸ್ತಾನ ತೆಗೆದುಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸಿದ್ದೇವು ಎಂದು ಗುರುವಾರ ಬಿಷ್ಕೆಕ್ ಶಾಂಘೈ ಸಹಕಾರ ಒಕ್ಕೂಟದ ಸಭೆಯಲ್ಲಿ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next