ಕೊಲ್ಕತ್ತಾ : ಶನಿವಾರ (ಏಪ್ರಿಲ್ 10) ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಸಂದರ್ಭದಲ್ಲಿ ಕೂಚ್ ಬೆಹಾರ್‌ನಲ್ಲಿ ಕೇಂದ್ರ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ಜನರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಉತ್ತರ ಬಂಗಾಳದಲ್ಲಿ ಐದನೇ ಹಂತದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕೇಂದ್ರ ಪಡೆಗಳ ವಿರುದ್ಧ ಜನರನ್ನು ಪ್ರಚೋದಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರವನ್ನು ಸೃಷ್ಟಿಸುತ್ತಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಅವರು ಮನವಿ ಮಾಡಿದ್ದಾರೆ.
ಓದಿ : ಈಗ ಕೇವಲ 2 ನಿಮಿಷಗಳಲ್ಲಿ ಪೇಟಿಎಂ ನಿಂದ 2 ಲಕ್ಷ ರೂ. ಸಾಲ ..!
ಚುನಾವಣೆಯ ಸಂದರ್ಭದಲ್ಲಿ ಕೂಚ್ ಬೆಹಾರ್ ನಲ್ಲಿ ನಲ್ಲಿ ಇಂದು ನಡೆದ ಘಟನೆ ಅಮಾನುಷ. ಈ ಘಟನೆ ದುಃಖವನ್ನು ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಅವರು ಹೇಳಿದ್ದಾರೆ.
ಇನ್ನು, ತೃಣಮೂಲ ಕಾಂಗ್ರೆಸ್ ನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಮೋದಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೆಂಬಲ ಜಾಸ್ತಿಯಾಗಿರುವುದರಿಂದ ದೀದಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಸೃಷ್ಟಿಯಾಗಿದೆ. ಕೂಚ್ ಬೆಹಾರ್ ನಲ್ಲಿ ಟಿ ಎಂ ಸಿ ಗೂಂಡಾಗಳು ತೋರಿದ ವರ್ತನೆ ಅತಿರೇಕವಾದದ್ದು. ಇನ್ನು ಮುಂದೆ ತೃಣಮೂಲ ಕಾಂಗ್ರೆಸ್ ನ ಗೂಂಡಾ ವರ್ತನೆಗಳಿಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶವಿಲ್ಲದಂತಾಗುತ್ತದೆ. ಈ ಕುರಿತಂತೆ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ದೀದಿ… ಪಶ್ಚಿಮ ಬಂಗಾಳದ ಚಿತ್ರಣವೇ ಬದಲಾಗುವ ಕಾಲ ಹತ್ತಿರ ಬಂದಿದೆ. ನೀವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲೇ ಬೇಕು ಎಂದು ಪ್ರಧಾನಿ ಹೇಳಿದ್ದಾರೆ.
ಓದಿ : ಮುಂಬೈ ವಿರುದ್ಧ ರೋಚಕ ಗೆಲುವು: ‘ಪಂಜಾಬ್ ಕಿಂಗ್ಸ್’ ತಂಡಕ್ಕೆ ಥ್ಯಾಂಕ್ಸ್ ಹೇಳಿದ್ದೇಕೆ RCB ?