Advertisement

ಇಮ್ರಾನ್‌ಖಾನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

06:00 AM Jul 31, 2018 | |

ಪೇಶಾವರ/ಹೊಸದಿಲ್ಲಿ: ಪಾಕಿಸ್ಥಾನದ ನಿಯೋಜಿತ ಪ್ರಧಾನಿ ಇಮ್ರಾನ್‌ ಖಾನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಕ್ಕೆ ಇಮ್ರಾನ್‌ಗೆ ಅಭಿನಂ ದನೆ ಸಲ್ಲಿಸಿದ ಮೋದಿ, ಪಾಕಿಸ್ಥಾನದಲ್ಲಿ ಪ್ರಜಾಪ್ರಭುತ್ವವು ಆಳಕ್ಕಿಳಿಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ. ಜತೆಗೆ, ಹೊಸ ಯುಗದ ಬಾಂಧವ್ಯಕ್ಕೆ ನಾವು ಸಿದ್ಧರಾಗಿದ್ದೇವೆ. ನೆರೆರಾಷ್ಟ್ರಗಳೊಂದಿಗೆ ಶಾಂತಿ ಮತ್ತು ಅಭಿವೃದ್ಧಿ ಬಯಸುತ್ತೇವೆ ಎಂದೂ ಹೇಳಿದ್ದಾರೆ.

Advertisement

ಈ ನಡುವೆ ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಆ. 11ರಂದು ಪ್ರಮಾಣ ವಚನ ಸ್ವೀಕರಿಸುವುದಾಗಿ ಇಮ್ರಾನ್‌ ಖಾನ್‌ ಹೇಳಿದ್ದಾರೆ. ಈ ನಡುವೆ ಇಸ್ಲಾಮಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ನವಾಜ್‌ ಷರೀಫ್ರನ್ನು ಲಂಡನ್‌ಗೆ ಚಿಕಿತ್ಸೆಗಾಗಿ ವರ್ಗಾಯಿಸುವ ಸಾಧ್ಯತೆ ಇದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಾಕಿಸ್ಥಾನ ಇನ್ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸ್‌ನ ವೈದ್ಯರು ಹೇಳಿದ್ದಾರೆ. ಸಂಸ್ಥೆಯ ವಾರ್ಡ್‌ ಅನ್ನೇ ಸಬ್‌ ಜೈಲ್‌ ಆಗಿ ಸದ್ಯ ಪರಿವರ್ತಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next