ನವದೆಹಲಿ:ಅಸ್ಸಾಂನಲ್ಲಿ ಬುಧವಾರ(ಏ.28) ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಕೇಂದ್ರ ಸರಕಾರ ಅಗತ್ಯ ನೆರವು ನೀಡುವ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬ್ಯಾಂಕಾಕ್ ನಿಂದ ಜಮ್ ನಗರ್ ಗೆ 3 ಆಮ್ಲಜನಕ ಟ್ಯಾಂಕರ್ ಗಳನ್ನು ತಲುಪಿಸಿದ ಐಎಎಫ್
ರಾಜ್ಯದ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿದ್ದು, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದಾ ಸೋನೊವಾಜಾಜಿ ಅವರ ಬಳಿ ಮಾತುಕತೆ ನಡೆಸಿದ್ದು, ಕೇಂದ್ರ ಸರಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ ಎಂಬುದಾಗಿ ಭರವಸೆ ನೀಡಿದ್ದೇನೆ. ಅಸ್ಸಾಂ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿದ್ದು, ಅಸ್ಸಾಂ ಮುಖ್ಯಮಂತ್ರಿ ಸೋನೊವಾಲಾಜಿ ಅವರ ಜತೆ ಮಾತುಕತೆ ನಡೆಸಿದ್ದು, ಅಸ್ಸಾಂನ ಸಹೋದರ, ಸಹೋದರಿಯರಿಗೆ ನೆರವು ನೀಡಲು ಕೇಂದ್ರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು. ಘಟನೆಯಲ್ಲಿ ಕೆಲವು ಕಟ್ಟಡ, ಮನೆಗಳಿಗೆ ಭಾಗಶಃ ಹಾನಿಯಾಗಿರುವುದಾಗಿ ವರದಿ ತಿಳಿಸಿದೆ.