Advertisement

Northeast In Assam; ಈಶಾನ್ಯದ ಮೊದಲ ಏಮ್ಸ್ ಆಸ್ಪತ್ರೆ ಉದ್ಘಾಟಿಸಿದ PM Narendra Modi

01:13 PM Apr 14, 2023 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಈಶಾನ್ಯದ ಮೊದಲ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಗುವಾಹಟಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

Advertisement

ಏಮ್ಸ್ ಗುವಾಹಟಿಯ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರು ಮೇ 2017 ರಲ್ಲಿ ನೆರವೇರಿಸಿದ್ದರು ಮತ್ತು 1120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಹಾಗೆಯೇ 14,300 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆ ಮತ್ತು ಶಂಕುಸ್ಥಾಪನೆಗಳನ್ನು ನೆರವೇರಿಸಲಿದ್ದಾರೆ.

ಗುವಾಹಟಿ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಅವರು ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬಿಹು ನೃತ್ಯದ ವಿಶ್ವ ದಾಖಲೆಗೆ ಸಾಕ್ಷಿಯಾಗಲಿದ್ದಾರೆ, ಅಲ್ಲಿ 10,000 ಕ್ಕೂ ಹೆಚ್ಚು ಕಲಾವಿದರು ಏಕಕಾಲದಲ್ಲಿ ಬಿಹು ನೃತ್ಯವನ್ನು ಪ್ರದರ್ಶಿಸಲಿದ್ದಾರೆ.

Advertisement


ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಪಲಾಶಬರಿ ಮತ್ತು ಸುಳ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಸೇತುವೆ ಮತ್ತು ಶಿವಸಾಗರದಲ್ಲಿ ‘ರಂಗ್ ಘರ್’ ಸೌಂದರ್ಯೀಕರಣ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next