ಲಕ್ನೋ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಕ್ನೋದಲ್ಲಿ 60 ಸಾವಿರ ಕೋಟಿ ರೂಪಾಯಿಯ ವಿವಿಧ ಯೋಜನೆಗಳಿಗೆ ಭಾನುವಾರ ಚಾಲನೆ ನೀಡಿದ್ದಾರೆ.
ಹಲವು ಯೋಜನೆಗಳಿಗೆ ಒಂದೇ ದಿನ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ ಇದು ಉತ್ತರ ಪ್ರದೇಶದದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಊಹಿಸಲಾಗದ ಸಾಧನೆ ಎಂದು ಕೊಂಡಾಡಿದರು.
ಇದು ಡಿಜಿಟಲ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾಗೆ ಹೊಸ ದಾರಿಯಾಗಲಿದೆ. ಉತ್ತರ ಪ್ರದೇಶದಲ್ಲಿ ಐಟಿ ಕ್ರಾಂತಿಯಾಗಲಿದೆ ಎಂದರು.
ಇಂದು ನಮ್ಮ ದೇಶ ವಿಶ್ವಕ್ಕೆ ಮೊಬೈಲ್ ಉತ್ಪಾದಕರ ಹಬ್ ಆಗುವತ್ತ ಸಾಗಿದೆ. ಉತ್ತರ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಮೊಬೈಲ್ ಉತ್ಪಾದಕ ಕಂಪನಿಗಳಿದ್ದು , ಅತೀ ದೊಡ್ಡ ಮೊಬೈಲ್ ಉತ್ಪಾದಕ ಕಂಪೆನಿಯೂ ಇಲ್ಲಿ ತಲೆ ಎತ್ತಲಿದೆ ಎಂದರು.
ಉತ್ತರಪ್ರದೇಶದಲ್ಲಿ ಹಿಂದೆ ಆಡಳಿತ ನಡೆಸಿದ್ದ , ಈಗ ವಿಪಕ್ಷಗಳಾದ ಕಾಂಗ್ರೆಸ್, ಬಿಎಸ್‌ಪಿ ಮತ್ತು ಎಸ್‌ಪಿ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಅಭಿವೃದ್ಧಿಯ ಕೊರತೆ ರಾಜ್ಯದಲ್ಲಿ ಯಾಕೆ ಆಗಿದೆ ಎಂದು ಪ್ರಶ್ನಿಸಿದರು.
ಉತ್ತರ ಪ್ರದೇಶ ಹೂಡಿಕೆದಾರರ ಶೃಂಗದಲ್ಲಿ ಸಹಿ ಹಾಕಲಾಗಿದ್ದ 4.28 ಲಕ್ಷ ಕೋಟಿ ರೂ. ಮೌಲ್ಯದ 1,045 ತಿಳಿವಳಿಕೆ ಒಪ್ಪಂದಗಳ ಪೈಕಿ 81 ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರು ಚಾಲನೆ ನೀಡಿದ್ದಾರೆ.