Advertisement

ನೂತನ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ: ನೂತನ ಕಟ್ಟಡ ಹೇಗಿರಲಿದೆ?

03:19 PM Dec 10, 2020 | Nagendra Trasi |

ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಡಿಸೆಂಬರ್ 10, 2020) ಭೂಮಿ ಪೂಜೆಯೊಂದಿಗೆ ಶಂಕು ಸ್ಥಾಪನೆ ನೆರವೇರಿಸಿದರು.

Advertisement

ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಿ ಮೋದಿ ಅವರು ಇಂಡಿಯಾ ಗೇಟ್ ಸಮೀಪ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು. ನೂತನ ಪಾರ್ಲಿಮೆಂಟ್ ಭವನದ ನಿರ್ಮಾಣ ಕಾರ್ಯ 2022ರಲ್ಲಿ ಪೂರ್ಣಗೊಳ್ಳಲಿದೆ.

ಶಂಕುಸ್ಥಾಪನೆಯ ಭೂಮಿ ಪೂಜೆ ಸಂದರ್ಭದಲ್ಲಿ ಹಲವು ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗು ಇತರ ಗಣ್ಯ ವ್ಯಕ್ತಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಟಾಟಾ ಟ್ರಸ್ಟ್ ಅಧ್ಯಕ್ಷ ರತನ್ ಟಾಟಾ, ಕೇಂದ್ರ ಸಚಿವ ಎಚ್.ಎಸ್.ಪುರಿ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಪಾಲ್ಗೊಂಡಿದ್ದರು.

ನೂತನ ಸಂಸತ್ ಭವನ ಹೇಗಿರಲಿದೆ?

Advertisement

ನೂತನ ಸಂಸತ್ ಭವನ 64,500 ತ್ರಿಭುಜಾಕೃತಿಯಲ್ಲಿ ತಲೆಎತ್ತಲಿದೆ. ಈ ಯೋಜನೆಗೆ 971 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಕಟ್ಟಡದಲ್ಲಿ 1224 ಸಂಸದರು ಒಟ್ಟಿಗೆ ಕುಳಿತುಕೊಳ್ಳುವ ಅವಕಾಶವಿದೆ. ನೂತನ ಸಂಸತ್ ಭವನದಲ್ಲಿ ಲೋಕಸಭೆಯಲ್ಲಿ 888 ಹಾಗೂ ರಾಜ್ಯಸಭೆಯಲ್ಲಿ 384 ಆಸನದ ವ್ಯವಸ್ಥೆ ಇರಲಿದೆ ಎಂದು ವರದಿ ಹೇಳಿದೆ.

ನೂತನ ಸಂಸತ್ ಭವನ ನಿರ್ಮಾಣವಾದ ನಂತರ ಹಳೆಯ ಕಟ್ಟಡ ಮ್ಯೂಸಿಯಂ ಆಗಿ ಪರಿವರ್ತಿಸಲಾಗುತ್ತದೆ. ನೂತನ ಸಂಸತ್ ಭವನದ ಎತ್ತರ 50 ಮೀಟರ್ ಇರಲಿದೆ ಎಂದು ವರದಿ ತಿಳಿಸಿದೆ.

ನೂತನ ಸಂಸತ್ ಭವನದೊಳಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿತ್ರಕಲೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಈ ಸಂಸತ್ ಭವನದಲ್ಲಿ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರಲಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next