Advertisement

ಕೋಲ್ಕತಾ: ತೀವ್ರ ಪ್ರತಿಭಟನೆ ನಡುವೆ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಭೇಟಿ, ಮಾತುಕತೆ

09:59 AM Jan 12, 2020 | Nagendra Trasi |

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೋಲ್ಕತಾ ಬಂದರು ಟ್ರಸ್ಟ್ ನ 150ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಪ್ರಧಾನಿಯನ್ನು ಪಶ್ಚಿಮಬಂಗಾಲ ಗವರ್ನರ್ ಜಗದೀಪ್ ಧಾನ್ಕಾರ್, ಕೋಲ್ಕತಾ ಮೇಯರ್, ಸಚಿವ ಫಿರ್ಹಾದ್ ಹಕೀಂ ಮತ್ತು ಇನ್ನಿತರರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದ್ದರು.

Advertisement

ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ಎರಡು ದಿನಗಳ ಕಾಲ ಪ್ರವಾಸ ನಡೆಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೋಲ್ಕತಾ ಬಂದರು ಟ್ರಸ್ಟ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ಮುಖ್ಯಮಂತ್ರಿ ಬ್ಯಾನರ್ಜಿ ನೇತೃತ್ವದಲ್ಲಿಯೂ ಬೃಹತ್ ಪ್ರತಿಭಟನೆ ನಡೆದಿತ್ತು.

ಕೋಲ್ಕತಾಕ್ಕೆ ಆಗಮಿಸುವ ಮುನ್ನ ವಿದ್ಯಾರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next