Advertisement

ದೇಶದ ಜನತೆ ಚಿರಋಣಿ-ಮೋದಿ; ಸಂವಿಧಾನ ಶಿಲ್ಪಿ ಅಂಬೇಡ್ಕರ್ 63ನೇ ಮಹಾ ಪರಿನಿರ್ವಾಣ ದಿನ

10:07 AM Dec 07, 2019 | Nagendra Trasi |

ನವದೆಹಲಿ: ಭಾರತದ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ 63ನೇ ಮಹಾ ಪರಿನಿರ್ವಾಣ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು.

Advertisement

ಅಂಬೇಡ್ಕರ್ ಜೀ ಅವರು ಸಂವಿಧಾನ ರಚಿಸುವ ಮೂಲಕ ದೇಶಕ್ಕೆ ಅದ್ವಿತೀಯವಾದ ಕೊಡುಗೆಯನ್ನು ನೀಡಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವದ ಮೈಲಿಗಲ್ಲಾಗಿದೆ. ಇದಕ್ಕಾಗಿ ನಮ್ಮ ದೇಶ ಯಾವಾಗಲೂ ಚಿರಋಣಿಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ಎನ್ ಸಿಪಿ ಮುಖಂಡ ಶರದ್ ಪವಾರ್, ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವಾರು ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಹೂಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು.

ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಚಾಂಪಿಯನ್, ಅಲ್ಲದೇ ಅವರೊಬ್ಬ ನಿಷ್ಠಾವಂತ ದೇಶಭಕ್ತರಾಗಿದ್ದರು. ಸಮಾಜದ ತಳಸಮುದಾಯವನ್ನು, ಬಡವರನ್ನು ಪ್ರಜೆಯಾಗಿ ಹಾಗೂ ಮಾನವೀಯ ನೆಲೆಗಟ್ಟಿನಲ್ಲಿ ಏಳಿಗೆ ಕಾಣಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಶ್ರಮ ಅಪ್ರತಿಮವಾದದ್ದು ಎಂದು ವೆಂಕಯ್ಯ ನಾಯ್ಡು ಟ್ವೀಟ್ ಮೂಲಕ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next