ಹೊಸದಿಲ್ಲಿ: ಗಾಂಧಿ ಜಯಂತಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಬೆಳಿಗ್ಗೆ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು.
ಬೆಳಗ್ಗೆ ರಾಜ್ ಘಾಟ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರು ರಾಜ್ ಘಾಟ್ ನಲ್ಲಿ ಗಾಂಧೀಜಿ ಸಮಾಧಿಗೆ ಗೌರವಾರ್ಥವಾಗಿ ಪುಷ್ಪಗಳನ್ನು ಅರ್ಪಿಸಿದರು.
ಇದನ್ನೂ ಓದಿ:ಕೇರಳದಲ್ಲಿನ ಕಠಿನ ಕ್ರಮ; ಸಮುದಾಯದಿಂದ ಸಿಗದ ಬೆಂಬಲ! ಮೌನಕ್ಕೆ ಶರಣಾದ ಪಿಎಫ್‌ಐ
“ಗಾಂಧಿ ಜಯಂತಿಯಂದು ಮಹಾತ್ಮ ಗಾಂಧಿ ಅವರಿಗೆ ನಮನ. ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವ ಆಚರಿಸುತ್ತಿರುವ ಸಂದರ್ಭದಲ್ಲಿ ಈ ಗಾಂಧಿ ಜಯಂತಿ ಇನ್ನಷ್ಟು ವಿಶೇಷವಾಗಿದೆ. ಬಾಪು ಅವರ ಆದರ್ಶಗಳನ್ನು ಸದಾ ಪಾಲಿಸುತ್ತಿರಬಹುದು. ಗಾಂಧೀಜಿಯವರಿಗೆ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ” ಎಂದು ವೀಡಿಯೊ ಗೌರವದೊಂದಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಅಂಗವಾಗಿ ಅವರನ್ನು ನೆನಪಿಸಿಕೊಂಡರು. ಶಾಸ್ತ್ರಿ ಅವರ ಸರಳತೆಯಿಂದ ಅವರು ದೇಶಾದ್ಯಂತ ಗೌರವಾನ್ವಿತರಾಗಿದ್ದಾರೆ ಎಂದು ಹೇಳಿದರು.
ಗಾಂಧಿ ಜಯಂತಿ ಅಂಗವಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೆಳಗ್ಗೆ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು.