Advertisement

ನ್ಯೂಯಾರ್ಕ್ ತಲುಪಿದ ಮೋದಿ : ಇಂದು ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

08:27 AM Sep 25, 2021 | Team Udayavani |

ನ್ಯೂಯಾರ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶನಿವಾರ) ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು (UNGA ) ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ಕಾರಣಕ್ಕೆ ಇಂದು ನ್ಯೂಯಾರ್ಕ್ ಗೆ ತೆರಳಿದ್ದಾರೆ.

Advertisement

ಇಂದು ಮೋದಿಯ ಭಾಷಣದಲ್ಲಿ ಕೋವಿಡ್ ಸಾಂಕ್ರಾಮಿಕ, ಭಯೋತ್ಪಾದನೆ, ಹವಾಮಾನ ಬದಲಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಪ್ರಸ್ತಾಪವಾಗಲಿವೆ.  ಇನ್ನು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಜೊತೆ ತಮ್ಮ ಮೊದಲ ವ್ಯಕ್ತಿಗತ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ವಾಷಿಂಗ್ಟನ್ ನಿಂದ ನ್ಯೂಯಾರ್ಕ್ ಗೆ ತೆರಳಿದ್ದಾರೆ.

ಇನ್ನು ನ್ಯೂಯಾರ್ಕ್ ನಲ್ಲಿ ಯುಎನ್ ಜಿಎ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಇಂದಿನ ಯುಎನ್ ಜಿಎಯ 76ನೇ ಅಧಿವೇಶನದ ಸಾಮಾನ್ಯ ಚರ್ಚೆಯಲ್ಲಿ ‘ಕೋವಿಡ್-19 ರಿಂದ ಚೇತರಿಸಿಕೊಳ್ಳುವ, ಸುಸ್ಥಿರವಾಗಿ ಪುನರ್ ನಿರ್ಮಿಸುವ, ಜನರ ಹಕ್ಕುಗಳನ್ನು ಗೌರವಿಸುವ ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವ ಬಗ್ಗೆ ಮಾತನಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next