ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನ ಮಂತ್ರಿಯವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದ ಮರುದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಜನರ ಸಾಮೂಹಿಕ ಚೈತನ್ಯಕ್ಕೆ ಇಂದು ಜಯ ಸಿಕ್ಕಿದೆ ಎಂದು ಶ್ಲಾಘಿಸಿದ್ದಾರೆ. ಹಾಗೆಯೇ ಗುರುವಾರಕ್ಕೆ 100 ಕೋಟಿ ಡೋಸ್ ಲಸಿಕೆ ದಾಟಿದ್ದು, ನಮ್ಮ ವೈದ್ಯರು, ನರ್ಸ್‌ಗಳು ಮತ್ತು ಈ ಸಾಧನೆಯಾಗಲು ಬೆಂಬಲ ನೀಡಿದ ಎಲ್ಲರಿಗೂ ಅಭಿನಂದಿಸುತ್ತೇನೆ. ಕಂಗ್ರಾಟ್ಸ್ ಇಂಡಿಯಾ ಎಂದು ಪ್ರಧಾನಿ ಗುರುವಾರ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಇನ್‌ವೆಸ್ಟ್ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ
ಲಸಿಕೆ ನೀಡಿಕೆಯಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ಬಹುತೇಕ ಎಲ್ಲಾ ರಾಜ್ಯಗಳು ಉತ್ತಮವಾದ ಸಾಧನೆಯನ್ನೇ ಮಾಡಿವೆ. ಶೇ.75ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದರೆ, ಶೇ.32ರಷ್ಟು ಮಂದಿ ಎರಡೂ ಡೋಸ್ ಪಡೆದಿದ್ದಾರೆ. ಸದ್ಯ ಕರ್ನಾಟಕ 6.17 ಕೋಟಿ ಡೋಸ್ ನೀಡಿದ್ದು 7ನೇ ಸ್ಥಾನದಲ್ಲಿದೆ. ಆದರೆ, ಎರಡೂ ಡೋಸ್ ನೀಡಿದ ರಾಜ್ಯಗಳ ಪೈಕಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ.