ನವದೆಹಲಿ: ದೇಶದಲ್ಲಿ ಕೋವಿಡ್ 19 ಎರಡನೇ ಅಲೆಯ ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜೂನ್ 07) ಸಂಜೆ 5ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ನಾಚಿಕೆ ಮಾನ- ಮಾರ್ಯಾದೆ ಇದ್ರೇ ರಾಜಕೀಯ ಮಾಡೊದ್ನ ನಿಲ್ಲಿಸಿ : ಬಿ.ವಿ.ಶ್ರೀನಿವಾಸ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡುವ ಮೂಲಕ ಘೋಷಿಸಿದೆ.
ಕಳೆದ ಎರಡು ತಿಂಗಳ ಬಳಿಕ ದೇಶದಲ್ಲಿ ಅತೀ ಕಡಿಮೆ ಪ್ರಮಾಣದ ಒಂದು ಲಕ್ಷ ಕೋವಿಡ್ ಪ್ರಕರಣ ವರದಿಯಾದ ನಂತರ ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಕೂಡಾ ಕಡಿಮೆಯಾಗಿದ್ದು, ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕೂಡಾ 14ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.