Advertisement

ಸೋಮವಾರ ಮಧ್ಯಾಹ್ನ ವಿವಿಧ ರಾಜ್ಯದ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಚರ್ಚೆ

08:11 AM May 11, 2020 | Nagendra Trasi |

ನವದೆಹಲಿ:ಕೋವಿಡ್ ಪರಿಸ್ಥಿತಿ ಬಗ್ಗೆ ವಿಮರ್ಶೆ ನಡೆಸುವ ನಿಟ್ಟಿನಲ್ಲಿ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯದ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

Advertisement

ವರದಿಯ ಪ್ರಕಾರ, ಕೋವಿಡ್ 19 ವೈರಸ್ ತಡೆಗಟ್ಟಲು ಜಾರಿಗೊಳಿಸಿರುವ ಲಾಕ್ ಡೌನ್ ಪ್ರಗತಿಯ ಬಗ್ಗೆ ವಿಮರ್ಶೆ ನಡೆಸಲಿದ್ದಾರೆ. ಹಂತ, ಹಂತವಾಗಿ ಆರ್ಥಿಕ ಚಟುವಟಿಕೆ ಆರಂಭಿಸಲು ಅವಕಾಶ ನೀಡಲಾಗಿದೆ. ಮೇ 17ರವರೆಗೆ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸಲಾಗಿತ್ತು.

ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಮುಂದಿನ ಹಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ ಆರ್ಥಿಕ ಚಟುವಟಿಕೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಿರ್ಬಂಧ ಸಡಿಲಿಕೆ ಬಗ್ಗೆ ರಾಜ್ಯಗಳ ಅಭಿಪ್ರಾಯ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ.

ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾಣನಿ ಮೋದಿ ಜತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹಾಗೂ ಕೆಲವು ಹಿರಿಯ ಅಧಿಕಾರಿಗಳು ಹಾಜರಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next