ಜಮ್ಮು/ಲಡಾಖ್: ಲೇಹ್, ಲಡಾಖ್ ಪ್ರದೇಶಕ್ಕೆ ಭೇಟಿ ನೀಡಿದ್ದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗಾಲ್ವಾನ್ ಕಣಿವೆ ಪ್ರದೇಶದ ಸಂಘರ್ಷದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಯೋಧರನ್ನು ಭೇಟಿಯಾಗಿ ಕುಶಲೋಪರಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಪ್ರಧಾನಿ ಮೋದಿ ಇಂದು ಸಿಡಿಎಸ್ ಜನರಲ್ ಬಿಪಿನ್ ರಾವತ್, ಆರ್ಮಿ ವರಿಷ್ಠ ಎಂಎಂ ನರಾವಣೆ ಅವರೊಂದಿಗೆ ಲಡಾಖ್ ಗೆ ಭೇಟಿ ಕೊಟ್ಟಿದ್ದರು.
ಜೂನ್ 15ರಂದು ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ತೆರಳಿದ್ದ ಭಾರತೀಯ ಸೈನಿಕರ ಮೇಲೆ ಚೀನ ಯೋಧರು ಏಕಾಏಕಿ ಕಲ್ಲು, ದೊಣ್ಣೆಗಳಿಂದ ದಾಳಿ ನಡೆಸಿದ್ದರು. ಇದರ ಪರಿಣಾಮ 20 ಮಂದಿ ಯೋಧರು ಹುತಾತ್ಮರಾಗಿದ್ದು, ಹಲವು ಸೈನಿಕರು ಗಾಯಗೊಂಡಿದ್ದರು.