ನವದೆಹಲಿ:ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ 19 ಸೋಂಕು ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾನವ ಸಂಪನ್ಮೂಲ ಬಳಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ(ಮೇ 02) ತಜ್ಞರ ಜತೆ ಸಭೆ ನಡೆಸಿ ಚರ್ಚಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಜನ ಆಶೀರ್ವದಿಸಿದ್ದಾರೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ : ಅಸ್ಸಾಂ ಸಿಎಂ ಸೋನೊವಾಲ್
ಮಹತ್ವದ ಸಭೆಯಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳು, ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳನ್ನು ಕೋವಿಡ್ 19 ಕರ್ತವ್ಯದಲ್ಲಿ ಪಾಲ್ಗೊಳ್ಳಲು ಸೂಚನೆ ನೀಡುವಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಕುರಿತ ವಿಸ್ತ್ರತ ವಿವರ ಸೋಮವಾರ(ಮೇ 03) ಹೊರಬೀಳಲಿದೆ ಎಂದು ವರದಿ ವಿವರಿಸಿದೆ.
ಕೋವಿಡ್ 19 ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮುಂದೂಡುವುದು ಹಾಗೂ ಕೋವಿಡ್ 19 ಪರಿಸ್ಥಿತಿ ನಿಭಾಯಿಸಲು ಎಂಬಿಬಿಎಸ್ ಪಾಸ್ ಔಟ್ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯುವುದು ಸೇರಿದಂತೆ ಹಲವು ನಿರ್ಧಾರ ತೆಗೆದುಕೊಂಡಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಶನಿವಾರ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಸೇರಿದಂತೆ 12 ಮಂದಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದರು. ಅಲ್ಲದೇ ದೆಹಲಿಯ ಖಾಸಗಿ ಆಸ್ಪತ್ರೆಯ ವಿಶ್ರಾಂತ ವೈದ್ಯರೊಬ್ಬರು ವಿಪರೀತ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡಾ ನಡೆದಿತ್ತು ಎಂದು ವರದಿ ಹೇಳಿದೆ.