Advertisement

ಇದೊಂದು ದೀರ್ಘ ಹೋರಾಟ, ಲಾಕ್ ಡೌನ್ ಸಡಿಲಗೊಂಡರೂ ಎಚ್ಚರಿಕೆ ಅಗತ್ಯ: ಮೋದಿ

03:01 PM May 31, 2020 | Nagendra Trasi |

ನವದೆಹಲಿ:ಕೋವಿಡ್ 19ನಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಲವಾರು ಹೊಸ ಆವಿಷ್ಕಾರಗಳು ನಡೆದಿದೆ. ಹಳ್ಳಿಗಳು, ನಗರಗಳಲ್ಲಿ ಕೋವಿಡ್ ವಿರುದ್ಧ ಹೋರಾಡಲು ಹೊಸ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಆದರೂ ದೇಶದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿದ್ದರೂ ಕೂಡಾ ಜನರು ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಾಲ್ಕನೇ ಹಂತದ ಲಾಕ್ ಡೌನ್ ನ ಕೊನೆಯ ದಿನವಾದ ಭಾನುವಾರ ದೇಶದ ಜನರನ್ನು ಉದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಿದರು.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಕಾಲಿರಿಸುತ್ತಿರುವ ವೇಳೆಯಲ್ಲಿ ಮನ್ ಕೀ ಬಾತ್ ಮೂಲಕ ಹಲವಾರು ವಿಷಯಗಳನ್ನು ಹಂಚಿಕೊಂಡರು.

ಕಳೆದ ಬಾರಿ ಮನ್ ಕೀ ಬಾತ್ ನಲ್ಲಿ ಮಾತನಾಡುತ್ತಿದ್ದ ವೇಳೆಯಲ್ಲಿ ಬಸ್, ವಿಮಾನ ಸೇವೆ ಸ್ಥಗಿತಗೊಂಡಿತ್ತು. ಆದರೆ ಈ ಬಾರಿ ಶ್ರಮಿಕ್ ವಿಶೇಷ ರೈಲು ಸಂಚರಿಸುತ್ತಿದೆ. ವಿಮಾನಗಳು ಪುನರಾರಂಭಗೊಂಡಿದೆ. ಕೈಗಾರಿಕೆಗಳು ಸೇರಿದಂತೆ ಬಹುತೇಕ ಆರ್ಥಿಕ ಚಟುವಟಿಕೆ ಎಂದಿನಂತೆ ಕಾರ್ಯನಿರ್ವಹಿಸತೊಡಗಿವೆ. ಈ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ಎಚ್ಚರಿಕೆ ಹಾಗೂ ಜಾಗ್ರತೆಯಿಂದ ಇರಬೇಕಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next