ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತದ ಬಜೆಟ್ ನತ್ತ ವಿಶ್ವದ ದೃಷ್ಟಿ ನೆಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜನವರಿ 31) ತಿಳಿಸಿದ್ದಾರೆ.
ಇದನ್ನೂ ಓದಿ:ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ
ಅವರು ಇಂದಿನಿಂದ ಆರಂಭಗೊಂಡ ಬಜೆಟ್ ಅಧಿವೇಶನಕ್ಕಾಗಿ ಸಂಸತ್ ಗೆ ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿಗೆ ಲೋಕಸಭೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಂಡಿಸಿದ್ದಾರೆ.
ಈ ದಿನ ಬುಡಕಟ್ಟು ಸಮಾಜಕ್ಕೆ ಹೆಮ್ಮೆಯ ದಿನವಾಗಿದೆ ಎಂದು ಮುರ್ಮು ಜಂಟಿ ಅಧಿವೇಶನಕ್ಕೂ ಮೊದಲು ಮಾತನಾಡುತ್ತ ತಿಳಿಸಿದ್ದರು. ನಮಗೆ ಒಂದೇ ಆಲೋಚನೆ ಇರಬೇಕು, ಅದೇನೆಂದರೆ ದೇಶ ಮೊದಲು, ಉಳಿದೆಲ್ಲವೂ ಎರಡನೇ ಸ್ಥಾನದಲ್ಲಿ ಇರಲಿದೆ. ಬಜೆಟ್ ಅಧಿವೇಶನದಲ್ಲಿ ವಾಗ್ವಾದದೊಂದಿಗೆ ಚರ್ಚೆ ನಡೆಸುತ್ತೇವೆ. ಸದನದೊಳಗೆ ಪ್ರತಿಯೊಂದು ವಿಷಯದ ಕುರಿತು ಉತ್ತಮವಾದ ಚರ್ಚೆ ನಡೆಸಬೇಕು. ಪೂರ್ಣ ಪ್ರಮಾಣದ ಸಿದ್ಧತೆಯೊಂದಿಗೆ ಎಲ್ಲಾ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಅಧಿವೇಶನ ಎಲ್ಲರಿಗೂ ಮುಖ್ಯವಾಗಿದೆ ಎಂದು ಮುರ್ಮು ಹೇಳಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಆರ್ಥಿಕ ವರ್ಷದ ಬಜೆಟ್ ಮಂಡಿಸುವ ಮುನ್ನಾ ದಿನ ಮುಖ್ಯ ಆರ್ಥಿಕ ಸಲಹೆಗಾರ ವಿ.ಅನಂತ್ ನಾಗೇಶ್ವರನ್ ಇಂದು ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.