Advertisement

ಅ.24ರಂದು ಯೋಧರ ಜತೆಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

09:47 PM Oct 17, 2022 | Team Udayavani |

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಕೇದಾರನಾಥ ಮತ್ತು ಬದರಿನಾಥ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.

Advertisement

ಅ.24ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಗಡಿ ಗ್ರಾಮ ಮಾನಕ್ಕೆ ಭೇಟಿ ನೀಡಿ ಗ್ರಾಮಸ್ಥರು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.

2014ರಲ್ಲಿ ಪ್ರಧಾನಿಯಾದ ಸಂದರ್ಭದಿಂದ ಇಲ್ಲಿಯವರೆಗೂ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಪದ್ಧತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದುರಿಸಿದ್ದಾರೆ.

ಅ.21ರಂದು ಉತ್ತರಾಖಂಡದ ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಬದರಿನಾಥ ಕ್ಷೇತ್ರಕ್ಕೆ ತೆರಳಿ ಅಲ್ಲಿ ತಂಗಲಿದ್ದಾರೆ. ಅ.22ರಂದು ಬೆಳಗ್ಗೆ ಬದರಿನಾಥನ ದರ್ಶನ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next