ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 5,200 ಕೋಟಿ ರೂಗೂ ಹೆಚ್ಚು ಮೌಲ್ಯದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ವಿವಿಧ ಹಸಿರು ಇಂಧನ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ವಿದ್ಯುತ್ ಕ್ಷೇತ್ರದ ಪರಿಷ್ಕೃತ ವಿತರಣಾ ಕ್ಷೇತ್ರದ ಯೋಜನೆ ರಾಷ್ಟ್ರೀಯ ಸೌರ ಮೇಲ್ಛಾವಣಿ ಪೋರ್ಟಲ್ ಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ಪ್ರಕಾರ, ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಧ್ಯಾಹ್ನ 12.30 ಕ್ಕೆ, ಜುಲೈ 25 ರಿಂದ 30 ರವರೆಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಭಾಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಉಜ್ವಲ್ ಭಾರತ್ ಉಜ್ವಲ್ ಭವಿಷ್ಯ – ಪವರ್ @2047’ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿಯವರು ಪರಿಷ್ಕೃತ ವಿತರಣಾ ವಲಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅವರು ಎನ್‌ಟಿಪಿಸಿಯ ವಿವಿಧ ಹಸಿರು ಇಂಧನ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ಸೌರ ಮೇಲ್ಛಾವಣಿ ಪೋರ್ಟಲ್ ಗೂ ಚಾಲನೆ ನೀಡಲಿದ್ದಾರೆ.
ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಸರ್ಕಾರವು ವಿದ್ಯುತ್ ವಲಯದಲ್ಲಿ ಅನೇಕ ಮಾರ್ಗಗಳ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿಕೆ ತಿಳಿಸಿದೆ. ಈ ಸುಧಾರಣೆಗಳು ಈ ವಲಯವನ್ನು ಮಾರ್ಪಡಿಸಿವೆ, ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಲಭ್ಯವಾಗುವಂತೆ ಮಾಡುವುದರ ಮೇಲೆ ಕೇಂದ್ರೀಕರಿಸಿದೆ. ಈ ಹಿಂದೆ ವಿದ್ಯುತ್ ಸಂಪರ್ಕವನ್ನು ಹೊಂದಿರದ ಸುಮಾರು 18,000 ಹಳ್ಳಿಗಳಿಗೆ ವಿದ್ಯುದ್ದೀಕರಣ ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಯನ್ನು ಸೂಚಿಸುತ್ತದೆ ಎಂದು ಹೇಳಲಾಗಿದೆ.
ಐತಿಹಾಸಿಕ ಉಪಕ್ರಮದಲ್ಲಿ, ಪ್ರಧಾನ ಮಂತ್ರಿಗಳು ವಿದ್ಯುತ್ ಸಚಿವಾಲಯದ ಪ್ರಮುಖ ಪರಿಷ್ಕೃತ ವಿತರಣಾ ವಲಯ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ, ಇದುವಿದ್ಯುತ್ ಇಲಾಖೆಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಆರ್ಥಿಕ ಸುಸ್ಥಿರತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.