Advertisement

ರಾಜ್ಯದ 75 ಕೆರೆ ಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ: ಸಿಎಂ

08:34 PM Apr 06, 2022 | Team Udayavani |

ಬೆಂಗಳೂರು: ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಬುಧವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾ.ಜ.ಪದ ಎಲ್ಲಾ ಪ್ರಮುಖರು ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಗಂಗಾವತಿ : ಮಾಜಿ ಸಚಿವ ಸಿ.ಯಾದವ್ ರಾವ್ ನಿಧನ 

ಇಂಧನ ಕ್ಷೇತ್ರದಲ್ಲಿ ಹಸಿರು ಕಾರಿಡಾರ್‌ನಲ್ಲಿ ಮೂರು ಯೋಜನೆಗಳನ್ನು ಸೇರ್ಪಡೆ ಮಾಡಬೇಕಿರುವ ವಿಷಯವೂ ಆರ್ಥಿಕ ಇಲಾಖೆಯ ಅನುಮೋದನೆಗೆ ಬರಲಿದೆ. ಅದನ್ನೂ ಮುಂಚಿತವಾಗಿ ಸಚಿವರ ಗಮನಕ್ಕೆ ತರಲಾಗಿದೆ. ಆದಷ್ಟೂ ಬೇಗನೆ ಇವುಗಳಿಗೆ ಅನುಮೋದನೆ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ ಎಂದರು.

ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆ :
ಜಿ.ಎಸ್‌.ಟಿ ಜಿ.ಒ. ಎಂ ಸಭೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ತಿಳಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್‌ ಗಳ ಮುಖಾಂತರ ಆಗಬೇಕಿರುವ ಕೆಲಸಗಳ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ಅಂತಾರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಇರುವುದರಿಂದ ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next