ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೇರಳದ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಕಳೆದ ಜುಲೈ 30 ರ ಮುಂಜಾನೆ ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿ ಮುನ್ನೂರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಲೆ ಇದೆ.
ಘಟನೆ ನಡೆದಂದಿನಿಂದ ಮಾಹಿತಿ ಪಡೆದುಕೊಳ್ಳುತ್ತಿರುವ ಪ್ರಧಾನಿ ಮೋದಿ ಆಗಸ್ಟ್ 10 (ಶನಿವಾರ) ರಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ತೆರಳಿ ಅಲ್ಲಿಂದ ಕಲ್ಪೆಟ್ಟಾ ತಲುಪಲಿದ್ದಾರೆ ಬಳಿಕ ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಳಿಕ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಇದೆ ವೇಳೆ ರಾಷ್ಟ್ರೀಯ ವಿಪತ್ತು ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ ಭೂಕುಸಿತದಲ್ಲಿ ಮುನ್ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಜೊತೆಗೆ ಇನ್ನೂ 138 ಮಂದಿ ನಾಪತ್ತೆಯಾಗಿದ್ದಾರೆ ಅವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: Viral Video: ಗ್ರಾಮದೊಳಗೆ ಅಡ್ಡಾದಿಡ್ಡಿ ಓಡಾಡಿ ಜನರಿಗೆ ಭೀತಿ ಹುಟ್ಟಿಸಿದ ಮೊಸಳೆ!