Advertisement

Wrestlers Protest; ಪಕ್ಷದ ಸಂಸದನನ್ನು ಉಳಿಸಲು ಪ್ರಧಾನಿ ಪ್ರಯತ್ನ: ಕಾಂಗ್ರೆಸ್

10:09 PM May 18, 2023 | Team Udayavani |

ಹೊಸದಿಲ್ಲಿ: ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ತಮ್ಮ ಮೌನ ಮುರಿಯುವಂತೆ ಕಾಂಗ್ರೆಸ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಪ್ರಧಾನಿ ಅವರು ತಮ್ಮ ಪಕ್ಷದ ನಾಯಕನನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ.

Advertisement

ವಿನೇಶ್ ಫೋಗಟ್, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಳು ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಇಲ್ಲಿನ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪದಕಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿರುವ ಕ್ರೀಡಾಪಟುಗಳು ನಾಲ್ಕು ತಿಂಗಳಿನಿಂದ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ, ಆದರೆ ಪ್ರಧಾನಿ ತಮ್ಮ ಸಂಸದರನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯಬೇಕು ಎಂದು ಒತ್ತಾಯಿಸಿದ್ದಾರೆ.

ಹರ್ಯಾಣ ಮೂಲದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಕೂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಭೇಟಿ ಮಾಡಿ ಅವರ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು.ದೇಶದ ಹೆಣ್ಣು ಮಕ್ಕಳ ಅಳಲು ಮತ್ತು ನ್ಯಾಯಕ್ಕಾಗಿ ಅವರ ಮನವಿಯನ್ನು ಮೋದಿ ಸರ್ಕಾರ ಏಕೆ ಕೇಳುತ್ತಿಲ್ಲ ಎಂದು ಹೇಳಿ, ಜಂತರ್ ಮಂತರ್‌ನಲ್ಲಿ ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹೆಣ್ಣುಮಕ್ಕಳಿಗೆ ಮತ್ತು ಹೆಸರಾಂತ ಕುಸ್ತಿಪಟುಗಳಿಗೆ ನಾನು ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ. ತಮ್ಮ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದರು.

ಈ ಹೋರಾಟದಲ್ಲಿ ನಮ್ಮ ಆಲೋಚನೆಗಳು, ಮಾತುಗಳು ಮತ್ತು ಕಾರ್ಯಗಳೊಂದಿಗೆ ನಾವು ಈ ಹೆಣ್ಣುಮಕ್ಕಳೊಂದಿಗೆ ಇದ್ದೇವೆ ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next