Advertisement
ಸಿದ್ಧತೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕೇಂದ್ರ ನೌಕಾ ಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ, ನವಮಂಗಳೂರು ಬಂದರಿನಲ್ಲಿ ಹಾಗೂ ಗೋಲ್ಡ್‌ಫಿಂಚ್ ಮೈದಾನದಲ್ಲಿ ಪ್ರಧಾನಿಯವರ ಕಾರ್ಯಕ್ರಮಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಮಂಗಳವಾರ ಪರಿಶೀಲಿ ಸಿದರು. ಬಳಿಕ ಸಭೆ ನಡೆಸಿ ಅವಶ್ಯ ಸೂಚನೆಗಳನ್ನು ನೀಡಿದರು. ಪ್ರಧಾನಿಯವರ ಕಾರ್ಯಕ್ರಮ ದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹೊÉàಟ್, ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಮತ್ತು ಶಾಸಕರು ಉಪಸ್ಥಿತರಿರುತ್ತಾರೆ.
Related Articles
ಮಧ್ಯಾಹ್ನ 1 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ವಿವಿಧ ಯೋಜನೆ ಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಬಳಿಕ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವರು.
Advertisement
ಎಸ್‌ಪಿಜಿ ತಂಡ ಆಗಮನಪ್ರಧಾನಿಯವರ ಭದ್ರತಾ ವ್ಯವಸ್ಥೆಯ ನಿಯೋಜನೆಗೊಂಡಿರುವ ಎಸ್ ಪಿಜಿಯ (ಸ್ಪೆಷಲ್ ಪ್ರೊಟೆ ಕ್ಷನ್ ಗ್ರೂಪ್) ಪೂರ್ಣ ಪ್ರಮಾಣದ ತಂಡ ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ಆರಂಭಿಸಿದೆ.
1.5 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಮತ್ತು ಪಾನೀಯ ವ್ಯವಸ್ಥೆ ಮಾಡಲಾಗಿದೆ. ಪರಶುರಾಮನ ವಿಗ್ರಹ ಸ್ಮರಣಿಕೆ
ಪ್ರಧಾನಿ ಮೋದಿಯವರಿಗೆ ಪರಶುರಾಮ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ದ.ಕ., ಉಡುಪಿ ಸೇರಿದಂತೆ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯಾಗಿದೆ. ವಿಷ್ಣುವಿನ ಅವತಾರವಾಗಿರುವ ಪರಶುರಾಮರು ಕೊಡಲಿ ಬೀಸಿ ಕಡಲು ಹಿಂದೆ ಸರಿಯುವಂತೆ ಮಾಡಿ ಕರಾವಳಿಯನ್ನು ಸೃಷ್ಟಿಸಿದ ಐತಿಹ್ಯವಿದೆ. ಈ ಹಿನ್ನೆಲೆಯಲ್ಲಿ ಪರಶುರಾಮ ಸೃಷ್ಟಿ ಕರಾವಳಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಪರಶುರಾಮ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ಮೂರ್ತಿ 2.5 ಅಡಿ ಎತ್ತರವಿದ್ದು ಉಡುಪಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.