Advertisement

ಪ್ರಧಾನಿ ಭೇಟಿಯಿಂದ ಕಾರ್ಯಕರ್ತರಲ್ಲಿ ಹೆಚ್ಚಿದ ಉತ್ಸಾಹ : ನಳಿನ್‍ಕುಮಾರ್ ಕಟೀಲ್

06:20 PM Jun 20, 2022 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಕರ್ನಾಟಕ ಭೇಟಿಯು ಕಾರ್ಯಕರ್ತರಲ್ಲಿ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

Advertisement

ಮೋದಿಯವರ ಕರ್ನಾಟಕ ಭೇಟಿ ನಿಜಕ್ಕೂ ನಮ್ಮೆಲ್ಲ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಮೋದಿಜಿ ಅವರು ಸುಮಾರು 33 ಸಾವಿರ ಕೋಟಿಗೂ ಹೆಚ್ಚು ಮೊತ್ತದ 19 ಯೋಜನೆಗಳ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದು, ಇದರಿಂದ ಕರ್ನಾಟಕವು ಸಮಗ್ರ ಅಭಿವೃದ್ಧಿಯ ಹೊಸ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯೋಗದ ಮೂಲಕ ಸ್ವಸ್ಥ ಮನಸ್ಸಿನಿಂದ ಆರೋಗ್ಯವಂತ ಜಗತ್ತಿನ ನಿರ್ಮಾಣವಾಗಬೇಕು ಎಂಬ ಸಂದೇಶ ನೀಡಿದ ಮೋದಿಜಿ ಅವರು, ಸಾಂಸ್ಕøತಿಕ ರಾಜಧಾನಿ ಮೈಸೂರಿಗೆ ಭೇಟಿ ಕೊಟ್ಟು ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಮಾನ್ಯ ಪ್ರಧಾನಿಯವರ ಈ ಭೇಟಿಯಿಂದ ಪಕ್ಷದ ಕಾರ್ಯಕರ್ತರು ಪ್ರೇರಣೆ ಪಡೆದಿದ್ದು, 2023ರಲ್ಲಿ ಪಕ್ಷವು ಮತ್ತೆ 150ಕ್ಕೂ ಹೆಚ್ಚು ಶಾಸಕರ ಬಲದೊಂದಿಗೆ ಅಧಿಕಾರಕ್ಕೆ ಏರಲು ನೆರವಾಗಲಿದೆ ಎಂಬ ವಿಶ್ವಾಸವನ್ನು ನಳಿನ್ ಕುಮಾರ್ ಕಟೀಲ್ ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ; 40 ವರ್ಷ ಬೇಕಾಯಿತು; ವಿಪಕ್ಷಗಳತ್ತ ಚಾಟಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next