ಇಸ್ಲಾಮಾಬಾದ್: ಪಾಕಿಸ್ತಾನ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಎರಡು ವಾರಗಳು ಕಳೆದ ನಂತರ ಕೊನೆಗೂ ಎರಡು ಪ್ರಮುಖ ರಾಜಕೀಯ ಪಕ್ಷಗಳು ಕೈಜೋಡಿಸುವ ಮೂಲಕ ಪಾಕ್ ನಲ್ಲಿ ಹೊಸ ಸರ್ಕಾರ ರಚನೆಗೆ ಸುಗಮ ಹಾದಿ ನಿರ್ಮಿಸಿಕೊಟ್ಟಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Telangana: 18 ವರ್ಷಗಳ ಕಾಲ ದುಬೈ ಜೈಲಿನಲ್ಲಿದ್ದ ಐವರು ಭಾರತೀಯರು ಕೊನೆಗೂ ಮರಳಿ ತವರಿಗೆ
ಪಾಕಿಸ್ತಾನದ ಪಿಎಂಎಲ್ (ನವಾಜ್) ಮತ್ತು ಪಿಪಿಪಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವರದಿಯಾಗಿದೆ. ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೇಹ್ರಿಕ್ ಇ ಇನ್ಸಾಫ್ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಪಿಎಂಎಲ್ ಎನ್ ಅಧ್ಯಕ್ಷ, ಮಾಜಿ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಉಭಯ ಪಕ್ಷಗಳು ಅಧಿಕಾರ ಹಂಚಿಕೆ ಸೂತ್ರವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು.
ಒಪ್ಪಂದದ ಪ್ರಕಾರ, ಶೆಹಬಾಜ್ ಷರೀಫ್ ಪಾಕಿಸ್ತಾನದ ನೂತನ ಪ್ರಧಾನಿ ಅಭ್ಯರ್ಥಿಯಾಗಲು ಒಪ್ಪಿಗೆ ಸೂಚಿಸಿದ್ದು,ಅದೇ ರೀತಿ ಪಿಪಿಪಿ ಉಪಾಧ್ಯಕ್ಷ ಅಸೀಫ್ ಅಲಿ ಜರ್ದಾರಿ ದೇಶದ ಅಧ್ಯಕ್ಷರಾಗಿ ನೇಮಕ ಮಾಡಲಾಗುವುದು ಎಂದು ಬಿಲಾವಲ್ ಭುಟ್ಟೋ ಜರ್ದಾರಿಗೆ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.