Advertisement

ಕೇಂದ್ರದಿಂದಲೇ ಮೊದಲ 3 ವರ್ಷದ ಪಿಂಚಣಿ

09:50 AM Mar 30, 2018 | Team Udayavani |

ಹೊಸದಿಲ್ಲಿ : ಹೊಸತಾಗಿ ಉದ್ಯೋಗಕ್ಕೆ ಸೇರಿದವರಿಗೆ ಮೂರು ವರ್ಷಗಳವರೆಗೆ ನೀಡಲಾಗುವ ಪಿಂಚಣಿಯ ಶೇ.12ರಷ್ಟನ್ನು ಭರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದಾಗಿ 1 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗುವ ಆಶಯವನ್ನು ಸರಕಾರ ಹೊಂದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟಕ್ಕಾಗಿ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2016ರಲ್ಲಿ ಆರಂಭಿಸಲಾಗಿದ್ದ ಪ್ರಧಾನ ಮಂತ್ರಿ ರೋಜ್‌ಗಾರ್‌ ಪ್ರೋತ್ಸಾಹನ್‌ ಯೋಜನಾ ವ್ಯಾಪ್ತಿಯಲ್ಲಿ ಸುಮಾರು 30 ಲಕ್ಷ ಮಂದಿಗೆ ಪ್ರಯೋಜನವಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ಹೇಳಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next