Advertisement

Article 370 ರದ್ದು ಬಳಿಕ ಇಂದು ಕಾಶ್ಮೀರಕ್ಕೆ ಪಿಎಂ ಮೊದಲ ಭೇಟಿ

12:41 AM Mar 07, 2024 | Team Udayavani |

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಜಮ್ಮು – ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. 2019ರಲ್ಲಿ ಜಮ್ಮು – ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡಲಿದ್ದಾರೆ.

Advertisement

ಈ ವೇಳೆ 6,400 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆ­­ಗಳನ್ನು ಅವರು ಘೋಷಿಸಲಿದ್ದು, ಶ್ರೀನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿ­ಸಿಯೂ ಮಾತನಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಕಣಿವೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಾಯ ìಕ್ರಮ­ದಲ್ಲಿ ಪ್ರಧಾನಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 5,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನೂ ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next