ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜ.27ರಂದು “ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಬಾರಿ ದಾಖಲೆಯ 38 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ.
ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪರೀಕ್ಷಾ ಒತ್ತಡದ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ವರ್ಷಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅದನ್ನು ನಡೆಸುತ್ತಿದ್ದಾರೆ ಎಂದರು.
ಕಳೆದ ವರ್ಷ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನೋಂದಣಿಯಾದವರ ಪೈಕಿ ಆಯ್ದ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಪರೇಡ್‌ಗೆ ಕೂಡ ಆಹ್ವಾನವಿದೆ.
ಕರ್ನಾಟಕದಿಂದಲೂ ಈಗಾಗಲೇ ಹಲವಾರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.