Advertisement

ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪೊಕೊ M3 ಪ್ರೊ 5G

03:26 PM May 15, 2021 | Team Udayavani |

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಪೊಕೊ ಇದೀಗ ತನ್ನ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಡೇಟ್‌ ಫಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಇದೇ ಮೇ 19ರಂದು ಬಿಡುಗಡೆ ಆಗಲಿದೆ.

Advertisement

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನುವುದು ಖಚಿತವಾಗಿದೆ. ಇದು 7nm ಪ್ರೊಸೆಸರ್ ಮತ್ತು 5G ನೆಟ್‌ವರ್ಕ್ ಸಂಪರ್ಕವನ್ನು ಹೊಂದಿದೆ. ಜೊತೆಗೆ ಇದು ಸೆಲ್ಫಿ ಸ್ನ್ಯಾಪರ್‌ಗಾಗಿ ಪಂಚ್-ಹೋಲ್ ಕಟೌಟ್, ಸುರಕ್ಷತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಹಿಂಭಾಗದಲ್ಲಿ ಡ್ಯುಯಲ್-ಟೋನ್ ಫಿನಿಶ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.ಐಆರ್ ಬ್ಲಾಸ್ಟರ್ ಮತ್ತು ಹೈ-ರೆಸ್ ಆಡಿಯೊವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬೆಲೆ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next