Advertisement

Pocso Case: ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ತಂದೆಗೆ 20 ವರ್ಷ ಸಜೆ

12:57 PM Oct 21, 2023 | Team Udayavani |

ಬೆಂಗಳೂರು: ಮೇಲೆಯೇ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷಗಳ ಜೈಲು ಶಿಕ್ಷೆಯನ್ನು ಬೆಂಗಳೂರಿನ ಪೋಕ್ಸೋ ಪ್ರಕರಣ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 7 ಲಕ್ಷ ರೂ. ಪರಿಹಾರ ನೀಡುವಂತೆ ಶಿಫಾರಸು ಮಾಡಲಾಗಿದೆ.

Advertisement

2022ರಲ್ಲಿ ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಗಳ ಮೇಲೆ 38 ವರ್ಷ ವಯಸ್ಸಿನ ತಂದೆ ನಿರಂತರ ಅತ್ಯಾಚಾರ ವೆಸಗಿದ್ದ. ವಿಚಾರ ತಿಳಿದು ಬಾಲಕಿಯ ತಾಯಿ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಅಂದಿನ ಠಾಣಾ ಇನ್‌ಸ್ಪೆಕ್ಟರ್‌ ಲೋಹಿತ್‌  ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ನಗರದ ಪೋಕ್ಸೋ ಪ್ರಕರಣಗಳ ನ್ಯಾಯಾಲಯದ ನ್ಯಾಯಾಧೀಶರಾದ ನರಸಮ್ಮ ಪ್ರಕರಣದ ವಿಚಾರಣೆ ನಡೆಸಿ  ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next