Advertisement

ಪೋಕ್ಸೋ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ

01:15 AM Apr 15, 2023 | Team Udayavani |

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೋಕೊÕ ತ್ವರಿತ ವಿಶೇಷ ನ್ಯಾಯಾಲಯವು 3 ವರ್ಷ ಜೈಲುಶಿಕ್ಷೆ ವಿಧಿಸಿ ಮಂಗಳವಾರ ಆದೇಶಿಸಿದೆ.

Advertisement

ಗೋವಿಂದ ನಾಯ್ಕ ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2021ರ ಮಾ. 2ರಂದು ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 13ವರ್ಷ ವಯಸ್ಸಿನ ಬಾಲಕಿಯು ಆರೋಪಿ ಗೋವಿಂದ ನಾಯ್ಕನ ಅಂಗಡಿಗೆ ಬಿಸ್ಕೆಟ್‌ ಖರೀದಿಸಲು ಹೋಗಿದ್ದಳು. ಈ ವೇಳೆ ಆರೋಪಿ ಬಾಲಕಿಗೆ ಬಿಸ್ಕೆಟ್‌ ನೀಡಿ, ಜ್ಯೂಸ್‌ ಕೊಡುವುದಾಗಿ ಹೇಳಿ ಅಂಗಡಿ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್‌ ಆರೋಪಿ ವಿರುದ್ಧ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿ ಗೋವಿಂದ ನಾಯ್ಕನನ್ನು ದೋಷಿ ಎಂದು ತೀರ್ಮಾನಿಸಿ ಆದೇಶಿಸಿದ್ದಾರೆ. ಅದರಂತೆ ಪೋಕೊÕ ಕಾಯ್ದೆಯಡಿ ಮೂರು ವರ್ಷ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ, 354(ಎ) ಕಾಯ್ದೆಯಡಿ ಒಂದು ವರ್ಷ ಸಾದಾ ಸಜೆ ಮತ್ತು 1,500 ರೂ. ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದ ಒಟ್ಟು 3,500ರೂ. ಮೊತ್ತದಲ್ಲಿ 2,000ರೂ. ಸಂತ್ರಸ್ತೆಗೆ ಹಾಗೂ 1,500 ರೂ. ಸರಕಾರಕ್ಕೆ ಪಾವತಿಸಬೇಕಾಗಿ ಆದೇಶದಲ್ಲಿ ತಿಳಿಸಲಾಗಿದೆ. ಪ್ರಾಸಿಕ್ಯೂಶನ್‌ ಪರವಾಗಿ ಉಡುಪಿ ಪೋಕೊÕ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next