Advertisement

POCSO Case: ಯಡಿಯೂರಪ್ಪ ವಿಚಾರಣೆ ಮುಂದಕ್ಕೆ

11:10 PM Jun 28, 2024 | Team Udayavani |

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

Advertisement

ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಮಂಜೂರು ಮಾಡಲು ಹಾಗೂ ಪ್ರಕರಣವನ್ನು ರದ್ದುಪಡಿಸಲು ಕೋರಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿ ಹೆಚ್ಚುವರಿ ಸರಕಾರಿ ವಿಶೇಷ ಅಭಿಯೋಜಕ ಬಿ.ಎನ್‌. ಜಗದೀಶ್‌, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ವಿಚಾರಣ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸ ಬೇಕಾಗಿದ್ದು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿ ಆದೇಶಿಸಿತು. ಅಲ್ಲದೇ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಈ ಹಿಂದೆ ನೀಡಿದ್ದ ಮಧ್ಯಾಂತರ ಆದೇಶವನ್ನು ಮುಂದಿನ ವಿಚಾರಣೆ ತನಕ ನ್ಯಾಯಾಲಯ ವಿಸ್ತರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next