ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿಯ ಕಿಚ್‌ಗುತ್ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತಗೊಂಡಿದೆ. ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಮಹದೇವಸ್ವಾಮಿ ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂಕೋರ್ಟ್ ಮೆಟ್ಟಿಲೇರಿ ದ್ದರೂ ಯಾವ ನ್ಯಾಯಾಲಯವು ಜಾಮೀನು ನೀಡಿಲ್ಲ.
ಅನಾರೋಗ್ಯದ ಕಾರಣ ನೀಡಿ ಮತ್ತೆ ಜಿಲ್ಲಾ ನ್ಯಾಯಾ ಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಮಹದೇವಸ್ವಾಮಿ ಕಳೆದ 5 ವರ್ಷ 11 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಈ ಹಿಂದೆ ಅವರು ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದರು. ಆ ವೇಳೆಯಲ್ಲಿ ಕಿಚ್‌ಗುತ್ ಮಾರಮ್ಮ ದೇವಾಲಯದ ಒಡೆತನವನ್ನು ತನ್ನ ತೆಕ್ಕೆಗೆ ತೆಗೆದು ಕೊಳ್ಳಲು ಹಾಗೂ ದೇವಾಲಯದ ಮತ್ತೂಂದು ಗುಂಪಿನ ಹೆಸರಿಗೆ ಮಸಿ ಬಳಿಯಲು ದೇವಾಲಯದ ಪ್ರಸಾದಕ್ಕೆ ಕೀಟನಾಶಕ ಮಿಶ್ರಣ ಮಾಡಿಸಿದ್ದರು ಎನ್ನಲಾಗಿದೆ.
ಈ ದುರ್ಘಟನೆಯಲ್ಲಿ 17 ಭಕ್ತರು ಮೃತಪಟ್ಟಿದ್ದರು. 127 ಮಂದಿ ಅಸ್ವಸ್ಥಗೊಂಡಿದ್ದರು.