ಹೊಸದಿಲ್ಲಿ: ಪಾಕ್ ಆಕ್ರಮಿತ ಕಾಶ್ಮೀರ (PoK) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಗುರುವಾರ ಬೆಂಬಲಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ, ಪಿಒಕೆ ಕುರಿತು ಭಾರತದ ನಿಲುವು ತುಂಬಾ ಸ್ಪಷ್ಟವಾಗಿದ್ದು, ಭಾರತದ ಭಾಗವಾಗಿದೆ ಮತ್ತು ನಿಲುವು ಬದಲಾಯಿಸಲು ಯಾವುದೇ ಕಾರಣವಿಲ್ಲ” ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಾಕಿಸ್ಥಾನ ತಿರಸ್ಕರಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಾಗ್ಚಿ,“ಪಿಒಕೆ ಕುರಿತು ನಮ್ಮ ನಿಲುವನ್ನು ನಿಜವಾಗಿಯೂ ಪುನರುಚ್ಚರಿಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಸಂಸತ್ತಿನಲ್ಲಿ ಗೃಹ ಸಚಿವರ ಹೇಳಿಕೆಯನ್ನು ನಾನು ಸ್ಪಷ್ಟಪಡಿಸುವ ಅಗತ್ಯವಿಲ್ಲ. ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ; ನಾವು ಇದನ್ನು ಭಾರತದ ಒಂದು ಭಾಗವೆಂದು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಪಾಕಿಸ್ಥಾನದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಭಾರತೀಯ ಅಧಿಕಾರಿಗಳಿಗೆ ಬೇಕಾದವರು ಇಲ್ಲಿಗೆ ಬಂದು “ಕಾನೂನು ವ್ಯವಸ್ಥೆಯನ್ನು ಎದುರಿಸಬೇಕು” ಎಂದರು.ಕ್ರಿಮಿನಲ್ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತದಲ್ಲಿ ನ್ಯಾಯವನ್ನು ಎದುರಿಸಲು ಬಯಸುವವರು, ಇಲ್ಲಿಗೆ ಬಂದು ನಮ್ಮ ಕಾನೂನು ವ್ಯವಸ್ಥೆಯನ್ನು ಎದುರಿಸಬೇಕೆಂದು ನಾವು ಬಯಸುತ್ತೇವೆ, ಆದರೆ ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಹೇಳಿದರು.
ಕತಾರ್‌ನಲ್ಲಿ ಮರಣದಂಡನೆಗೆ ಗುರಿ ಯಾಗಿರುವ ಭಾರತೀಯ ನೌಕಾಪಡೆಯ 8 ಮಂದಿ ಮಾಜಿ ಅಧಿಕಾರಿಗಳನ್ನು ಭಾರತದ ರಾಯಭಾರಿ ಡಿ. 3ರಂದು ಭೇಟಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. “ಮರಣ ದಂಡನೆ ಶಿಕ್ಷೆ ಪ್ರಶ್ನಿಸಿ, ಭಾರತ ಸಲ್ಲಿಸಿರುವ ಅರ್ಜಿ 2 ಬಾರಿ ವಿಚಾರಣೆಗೆ ಬಂದಿದೆ. ಗಲ್ಲು ಶಿಕ್ಷೆಗೆ ಒಳ ಗಾದ ಭಾರತೀಯರು ಮತ್ತು ಅವರ ಕುಟುಂಬ ದವರ ಪರವಾಗಿ ನಾವಿದ್ದೇವೆ. ಕಾನೂನು ಹೋರಾಟ ನಡೆಸಲು ತಜ್ಞರ ನೆರವು ಪಡೆಯ ಲಾಗಿದೆ. ಇದು ಸೂಕ್ಷ್ಮ ವಿಷಯವಾಗಿದ್ದು, ಎಲ್ಲ ರೀತಿ ಯಲ್ಲೂ ಪ್ರಯತ್ನ ನಡೆಸುತ್ತಿದ್ದೇವೆ’ ಎಂದಿದ್ದಾರೆ.