ನವದೆಹಲಿ:ಜಮ್ಮು-ಕಾಶ್ಮೀರದ ವಿಚಾರದಲ್ಲಿ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾರತದ ಭಾಗವಾಗಿದೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ (ಅವಿಭಾಜ್ಯ) ಅಂಗವಾಗಿದೆ. ಒಂದು ದಿನ ನಾವು ಅದನ್ನು ನಮ್ಮ ತೆಕ್ಕೆಗೆ ತೆಗೆದುಕೊಳ್ಳುವ ನಿರೀಕ್ಷೆ ನಮ್ಮದಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಪಿಒಕೆಯಲ್ಲಿ ನಮ್ಮ ಸ್ಥಾನ ಯಾವತ್ತಿಗೂ ಇದೆ. ಇದು ಎಂದೆಂದಿಗೂ ಸುಸ್ಪಷ್ಟ..ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿದೆ ಎಂದರು.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಯ ದೇಶಗಳ ಜತೆ ಉತ್ತಮ ಹಾಗೂ ಬಲಿಷ್ಠ ಸ್ನೇಹ ಹೊಂದುವುದಾಗಿದೆ. ಆದರೆ ಕೇವಲ ಒಂದೇ ಒಂದು ನೆರದೇಶ ನಮಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಗಡಿ ಭಯೋತ್ಪಾದನೆ ವಿಚಾರದಲ್ಲಿ ಇನ್ನೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ ನೆರೆಯ ದೇಶ ದೊಡ್ಡ ತೊಡಕಾಗಿದೆ ಎಂದು ಪರೋಕ್ಷವಾಗಿ ಪಾಕ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಹೋರಾಡುತ್ತಿರುವುದು 370ನೇ ವಿಧಿ ರದ್ದುಪಡಿಸಿದ್ದಕ್ಕಲ್ಲ. ಆ ಪ್ರದೇಶದಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ನಡೆಸಲು ಎಂದು ಜೈಶಂಕರ್ ವಾಗ್ದಾಳಿ ನಡೆಸಿದರು.