Advertisement
ಈತನ ಬಂಧನದೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ 9ಕ್ಕೆ ಏರಿದೆ. ಇನ್ನುಳಿದ ಇಬ್ಬರು ಆರೋಪಿಗಳಲ್ಲಿ ಒಬ್ಟಾತ ವಿದೇಶಕ್ಕೆ ಪರಾರಿ ಯಾಗಿದ್ದಾನೆಂಬ ಊಹಾಪೋಹಗಳಿದ್ದು, ಶೋಧ ಕಾರ್ಯ ಮುಂದುವರಿದಿದೆ. ಶರೀಫ್ ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದು, ಹಳೆ ಆರೋಪಿ ಯಾಗಿದ್ದಾನೆ. ಆತನ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮತ್ತು ಬಂಟÌಳ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿವೆ.
ನಗರದ ಸರಕಾರಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಶರೀಫ್ ಹುಡುಗಿಯರ ವಿಷಯಕ್ಕೆ ಸಂಬಂ ಧಿಸಿ ನಡೆದ ಗಲಾಟೆಯಲ್ಲಿ ಆರೋಪಿಯಾದ ಕಾರಣ ಆತನನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬಂಟ್ವಾಳದ ರಹೀಂ ಆಲಾಡಿ ಹಾಗೂ ಹಾಸನದ ಸಲೇಹ ಯಾನೆ ಸ್ವಲೇಹ್ ಮತ್ತು ಸಾದಿಕ್ ಪಾಷ ಅವರನ್ನು ಶನಿವಾರ ಬಂಧಿಸಲಾಗಿತ್ತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಒಂದು ವಾರ ಅವಧಿಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
Related Articles
Advertisement
ಬಂಧಿತರಾದ ಎಲ್ಲ ಆರೋಪಿಗಳು ಪಿಎಫ್ಐ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಆರೋಪಿಗಳಿಗೆ ಸಹಾಯ ಮಾಡಿದವರು ಇನ್ನೂ ಯಾರಾದರೂ ಇದ್ದಾರೆಯೇ ಎನ್ನುವುದು ಹಾಗೂ ಹತ್ಯೆಗೆ ಪ್ರಮುಖ ಕಾರಣ ಏನೆಂಬುದು ಆರೋಪಿಗಳ ವಿಚಾರಣೆಯಿಂದ ತಿಳಿದು ಬರಬೇಕಾಗಿದೆ.
ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಏಳು ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ತನಿಖೆ ನಡೆಸಿದ್ದರು.