Advertisement

ಸಿನಿಮೀಯ ರೀತಿಯ ಕಾರ್ಯಾಚರಣೆ: ಮಂಡ್ಯದ ಅರ್ಚಕರನ್ನು ಕೊಂದ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

02:10 PM Sep 14, 2020 | keerthan |

ಮಂಡ್ಯ: ನಗರದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣ ದೋಚಿದ್ದ ಮೂವರು ಆರೋಪಿಗಳ ಹೆಡೆ ಮುರಿ ಕಟ್ಟುವಲ್ಲಿ ಸೋಮವಾರ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳ ಪತ್ತೆಗೆ ರಚನೆ ಮಾಡಿದ್ದ ಗ್ರಾಮಾಂತರ ಪೋಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೋಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂಬುವವರನ್ನು ಬಂಧಿಸಿದ್ದಾರೆ.

ಬಂಧನದ ವೇಳೆ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮೇಲೆ ಆರೋಪಿಗಳು ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಕನ್ನಡಿಗರ ವಿರೋಧವಿದೆ: ಎಚ್ ಡಿ ಕುಮಾರಸ್ವಾಮಿ

Advertisement

ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಕಾರ್ಯಾಚರಣೆ ಕೈಗೊಂಡ ಪೋಲೀಸರು ಮೂವರ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಭಯಭೀತರಾಗಿ ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ಪೂರ್ವ ಪೋಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಮೂವರು ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

Advertisement

Udayavani is now on Telegram. Click here to join our channel and stay updated with the latest news.

Next