Advertisement

ರೈತರ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರ ಬ್ರೇಕ್‌

12:34 PM Jan 27, 2021 | Team Udayavani |

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ರೈತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜನಗಣ ರಾಜ್ಯೋತ್ಸವ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರು ಬ್ರೇಕ್‌ ಹಾಕಿದ್ದು, ರೈತರು ರಾಷ್ಟ್ರ ಧ್ವಜದೊಂದಿಗೆ ಕಾರ್‌ ಇನ್ನಿತರೆ ವಾಹನಗಳ ಮೂಲಕ ಫ್ರೀಡಂ ಪಾರ್ಕ್‌ಗೆ ತೆರಳಿದರು.

Advertisement

ಜಿಲ್ಲೆಯಲ್ಲಿ ಬೆಳಗಿನ ಜಾವ ದಟ್ಟವಾದ ಮಂಜು ಮತ್ತು ಚಳಿ ಲೆಕ್ಕಿಸದೆ ರೈತರು ಟ್ರ್ಯಾಕ್ಟರ್‌ಗಳೊಂದಿಗೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಲು ಸಿದ್ಧತೆ ಮಾಹಿತಿ ಅರಿತ ಪೊಲೀಸರು ತಾಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ಗಳನ್ನು ತಡೆಗಟ್ಟಿ ಬೇರೆ ವಾಹನಗಳ ಮೂಲಕ ಬೆಂಗಳೂರಿಗೆ ತೆರಳಲು ಅವಕಾಶ ಮಾಡಿಕೊಟ್ಟರು.

ಕೃಷಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಿಹಠಮಾರಿ ಧೋರಣೆ ಅನುಸರಿಸುತ್ತಿದ್ದು, ಇದರಿಂದ ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡುವ  ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ

ದಸಂಸ ಬೆಂಬಲ: ಕೇಂದ್ರದ ನೀತಿಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟ ಬೆಂಬಲಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಫ್ರೀಡಂ ಪಾರ್ಕ್‌ ಚಲೋ ನಡೆಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಆನಂದ್‌ಕುಮಾರ್‌ ನೇತೃತ್ವದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕಾರ್ಯಕರ್ತರು, ರೈತರ ಹೋರಾಟಗಳಿಗೆ ಬೆಂಬಲಿಸುವುದಾಗಿ ತಿಳಿಸಿದರು.

Advertisement

ಶಿಡ್ಲಘಟ್ಟ: ರೈತ ಸಂಘದ ಹಾಗೂ ಹಸಿರುಸೇನೆಯ ಪುಟ್ಟಣ್ಣಯ್ಯ ಬಣದ ಸದಸ್ಯರು ಶಿಡ್ಲಘಟ್ಟ ನಗರದ ಪ್ರವಾಸಿ ಮಂದಿರ ಬಳಿ ಜಮಾವಣೆಗೊಂಡು ನಂತರ ಬಸ್‌ಗಳ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅರುಣ್‌ಕುಮಾರ್‌, ಪ್ರಧಾನ ಕಾರ್ಯದರ್ಶಿ ವೆಂಕಟಸ್ವಾಮಿ, ತಾಲೂಕು ಅಧ್ಯಕ್ಷ ರವಿಕುಮಾರ್‌ ಉಪಸ್ಥಿತರಿದ್ದರು.  ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಜಿಲ್ಲಾಧ್ಯಕ್ಷ ಯಣ್ಣೂರು ಬಸವರಾಜ್‌ ನೇತೃತ್ವದಲ್ಲಿ ಶಿಡ್ಲಘಟ್ಟದಲ್ಲಿ ಟ್ರ್ಯಾಕ್ಟರ್‌ ನಿಲ್ಲಿಸಿ ವಾಹನಗಳ ಮೂಲಕ ಬೆಂಗಳೂರಿನ ಪ್ರೀಡಂಪಾರ್ಕ್‌ಗೆ ಪ್ರಯಾಣ ಬೆಳೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next