Advertisement

ವೈಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ ಪೊಲೀಸರು

12:59 AM Dec 12, 2022 | Team Udayavani |

ಹೈದರಾಬಾದ್‌: ಪಾದಯಾತ್ರೆಗೆ ಅನುಮತಿ ನೀಡಿದ್ದನ್ನು ನಿರಾಕರಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

ರವಿವಾರ ಈ ಬೆಳವಣಿಗೆ ನಡೆದಿದೆ. ಶುಕ್ರವಾರದಿಂದ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ರವಿವಾರ ಬೆಳಗ್ಗಿನ ಜಾವ ಪೊಲೀಸರು ಹೈದರಾಬಾದ್‌ನಲ್ಲಿ ಇರುವ ಅವರ ಪಕ್ಷದ ಕಚೇರಿಯ ಆವರಣಕ್ಕೆ ಆಗಮಿಸಿ ಬಲವಂತ­ವಾಗಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಪರೀಕ್ಷೆ ನಡೆಸಿದ್ದ ವೈದ್ಯರು ರಕ್ತದ ಒತ್ತಡ ಗಣನೀಯ ಪ್ರಮಾಣದಲ್ಲಿ ಕುಸಿದು ಹೋಗಿರುವುದಾಗಿ ತಿಳಿಸಿದ್ದರು. ಸದ್ಯ ಅವರ ಸ್ಥಿತಿ ಸುಧಾರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next