Advertisement

Puttur; ಪೊಲೀಸ್‌ ದೌರ್ಜನ್ಯ: ತನಿಖೆ ನಡೆಸಿ ವರದಿ ಸಲ್ಲಿಸಲು ಮಾನವ ಹಕ್ಕು ಆಯೋಗ ಸೂಚನೆ

10:01 PM Jan 14, 2024 | Team Udayavani |

ಪುತ್ತೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್‌ ಕುಮಾರ್‌ ಕಟೀಲು ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಪಶ್ಚಿಮ ವಲಯ ಐಜಿಪಿಗೆ ಸೂಚನೆ ನೀಡಿದೆ.

Advertisement

ವಿಧಾನಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟವಾದ ಬಳಿಕ ಡಿ.ವಿ.ಸದಾನಂದ ಗೌಡ ಮತ್ತು ದ.ಕ.ಸಂಸದ ನಳಿನ್‌ ಕುಮಾರ್‌ ಅವರ ಭಾವಚಿತ್ರದೊಂದಿಗೆ, “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದು ಪುತ್ತೂರು ಸರಕಾರಿ ಬಸ್‌ ನಿಲ್ದಾಣದ ಬಳಿ ಬ್ಯಾನರ್‌ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಕುರಿತು ನಗರಸಭೆಯ ಆಯುಕ್ತ ಮಧು ಎಸ್‌. ಮನೋಹರ್‌ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಹಿಂದೂ ಸಂಘಟನೆಯ 9 ಕಾರ್ಯಕರ್ತರನ್ನು ಬಂಧಿಸಿ ಅವರ ಮೇಲೆ ತೀವ್ರ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಲಾಗಿತ್ತು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಎಲ್ಲೆಡೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪೊಲೀಸ್‌ ದೌರ್ಜನ್ಯಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next